ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ರಪಕ್ಷಗಳ ಮುಖಂಡರ ಜತೆ ಇಂದು ಸಭೆ ನಡೆಸಲಿದ್ದಾರೆ. ಕೆಲವು ಭಾಗಗಳಲ್ಲಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಚರ್ಚಿಸುವ ಸಲುವಾಗಿ ಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.
ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಹಿರಿಯ ನಾಯಕರು ಸಭೆಯಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ಬಗ್ಗೆ ನಾಯಕರು ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ, ರಾಜ್ಯಸಭೆ ಬಿಜೆಪಿ ಸಂಸದ ನಾರಾಯಣ್ ರಾಣೆ ಸೋಮವಾರ ಮಹಾರಾಷ್ಟ್ರ ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿಯೂ ಉದ್ಧವ್ ಸಭೆಗೆ ಹೆಚ್ಚಿನ ಮಹತ್ವ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.