ಕೇಜ್ರಿವಾಲ್ ಮನೆಯಲ್ಲಿ ಉದ್ಧವ್ ಠಾಕ್ರೆ
- ಪಿಟಿಐ ಚಿತ್ರ
ನವದೆಹಲಿ: ಶಿವಸೇನಾ (ಯುಟಿಬಿ) ಮುಖ್ಯಸ್ಥ ಉದ್ಧವ್ ಠಾಕ್ರೆ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿ, ಅರವಿಂದ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಕೇಜ್ರಿವಾಲ್ ಅವರನ್ನು ಭೇಟಿಯಾದರು.
ಅವರ ಜೊತೆ ಪುತ್ರ ಆದಿತ್ಯ ಠಾಕ್ರೆ ಹಾಗೂ ಪಕ್ಷದ ನಾಯಕ ಸಂಜಯ್ ರಾವುತ್ ಕೂಡ ಇದ್ದರು.
ಮಾತುಕತೆ ವೇಳೆ ಎಎಪಿ ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್ ಹಾಗೂ ರಾಘವ ಛಡ್ಡಾ ಕೂಡ ಹಾಜರಿದ್ದರು.
ಕೇಜ್ರಿವಾಲ್ ನೇತೃತ್ವದ ಎಎಪಿ ಹಾಗೂ ಠಾಕ್ರೆ ನೇತೃತ್ವ ಶಿವಸೇನಾ (ಯುಟಿಬಿ) ಎರಡೂ ಪಕ್ಷಗಳು ಇಂಡಿಯಾ ಮೈತ್ರಿಕೂಟದ ಭಾಗವಾಗಿವೆ.
ಮುಂಬರುವ ಮಹಾರಾಷ್ಟ್ರ, ಹರಿಯಾಣ, ಜಾರ್ಖಂಡ್ ವಿಧಾನಸಭೆ ಚುನಾವಣೆ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರೊಂದಿಗೆ ಚರ್ಚಿಸಲು ಉದ್ಧವ್ ಠಾಕ್ರೆ ರಾಷ್ಟ್ರ ರಾಜಧಾನಿಗೆ ಆಗಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.