ADVERTISEMENT

ಮರಾಠಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ: ಪ್ರಧಾನಿಗೆ ಉದ್ಧವ್ ಪತ್ರ

Uddhav Thackeray Writes To PM Modi For Classical Language Status For Marathi

ಪಿಟಿಐ
Published 25 ಡಿಸೆಂಬರ್ 2019, 12:31 IST
Last Updated 25 ಡಿಸೆಂಬರ್ 2019, 12:31 IST
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ   

ಮುಂಬೈ : ಮರಾಠಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

‘ಈ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯು 2013ರ ನವೆಂಬರ್ 16ರಂದು ಕೇಂದ್ರಕ್ಕೆ ವರದಿ ಸಲ್ಲಿಸಿತ್ತು’ ಎಂದು ಉದ್ಧವ್ ತಿಳಿಸಿದ್ದಾರೆ.

‘ಮರಾಠಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ವಿಷಯವು ದೀರ್ಘಕಾಲದಿಂದ ಬಾಕಿ ಉಳಿದಿದ್ದು, ಇದನ್ನು ವೈಯಕ್ತಿಕವಾಗಿ ಪರಿಶೀಲಿಸುವಂತೆ’ ಪ್ರಧಾನಿ ಮೋದಿ ಅವರಿಗೆ ಪತ್ರದಲ್ಲಿ ಉದ್ಧವ್ ಕೋರಿದ್ದಾರೆ.

ADVERTISEMENT

ಪ್ರಸ್ತುತ ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒರಿಯಾ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.