ADVERTISEMENT

ರೋಜ್‌ಗಾರ್‌ ಮೇಳ: ಮೋದಿ ವಿರುದ್ಧ ಆಯೋಗಕ್ಕೆ ಠಾಕ್ರೆ ನೇತೃತ್ವದ ಶಿವಸೇನಾ ದೂರು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2022, 14:07 IST
Last Updated 28 ಅಕ್ಟೋಬರ್ 2022, 14:07 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ:ಪ್ರಧಾನಿ ನರೇಂದ್ರ ಮೋದಿ ಅವರು ‘ರೋಜ್‌ಗಾರ್ ಮೇಳ’ಕ್ಕೆ (ಉದ್ಯೋಗ ಮೇಳ) ಚಾಲನೆ‌‌‌ ನೀಡಿ75,000 ಜನರಿಗೆ ನೇಮಕಾತಿ ಪ್ರಮಾಣ ಪತ್ರ ಹಸ್ತಾಂತರಿಸಿದ ಬೆನ್ನಲ್ಲೇ, ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನಾ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದು ರಾಜಕೀಯ ಉದ್ದೇಶದ ನಡೆಯಾಗಿದ್ದು, ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.

‘ರೋಜ್‌ಗಾರ್‌ ಮೇಳಗಳು ಅಖಿಲ ಭಾರತ ಸೇವಾ ನಿಯಮಗಳನ್ನು ಉಲ್ಲಂಘಿಸುತ್ತವೆ.ನಾಗರಿಕ ಸೇವಾ ನಿಯಮಗಳ ಪ್ರಕಾರ ಸಂಬಂಧಪಟ್ಟ ವಿಭಾಗದ ಮುಖ್ಯಸ್ಥರುಯಾವುದೇ ನೇಮಕಾತಿ ಪತ್ರ ವಿತರಣೆ ಮಾಡಬೇಕು. ಆದರೆ, ಸಚಿವರು ಅಥವಾ ರಾಜಕೀಯವಾಗಿ ಸಂಬಂಧ ಹೊಂದಿರುವ ವ್ಯಕ್ತಿಗಳು ಹೇಗೆ ನೇಮಕಾತಿ ಪತ್ರ ನೀಡಬಹುದು’ ಎಂದು ಶಿವಸೇನಾ ವಕ್ತಾರ ಕಿಶೋರ್‌ ತಿವಾರಿ ಪ್ರಶ್ನಿಸಿದ್ದಾರೆ.

‘ಆಡಳಿತಾರೂಢ ಪಕ್ಷವೊಂದು ಲಾಭದ ಉದ್ದೇಶದಿಂದ ಕಾರ್ಯರೂಪಕ್ಕೆ ತರುವ ಯೋಜನೆಯು ಅಕ್ರಮ ಮಾತ್ರವಲ್ಲ, ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳು ಮತ್ತು ಚುನಾವಣಾ ಆಯೋಗದ ಮಾರ್ಗಸೂಚಿಯ ವಿರುದ್ಧವಾದುದು’ ಎಂದು ಅವರು ಆಯೋಗಕ್ಕೆ ಬರೆದ ಮನವಿಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.