ADVERTISEMENT

ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಶಬರಿಮಲೆ ನಿಯಮ ರೂಪಿಸಲಿದ್ದೇವೆ: ಕಾಂಗ್ರೆಸ್

ಏಜೆನ್ಸೀಸ್
Published 7 ಫೆಬ್ರುವರಿ 2021, 6:34 IST
Last Updated 7 ಫೆಬ್ರುವರಿ 2021, 6:34 IST
ಶಬರಿಮಲೆ
ಶಬರಿಮಲೆ   

ಕೊಚ್ಚಿ: ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಜಯ ಗಳಿಸಿದರೆ, ಶಬರಿಮಲೆಯಲ್ಲಿ ಮಹಿಳಾ ಪ್ರವೇಶಾತಿಗೆ ಸಂಬಂಧಿಸಿದಂತೆ ಭಕ್ತರ ನಂಬಿಕೆಗಳಿಗೆ ಧಕ್ಕೆಯಾಗದಂತೆ ನಿಯಮ ರೂಪಿಸಲಾಗುವುದು ಎಂದು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ (ಕೆಪಿಸಿಸಿ) ಮುಲ್ಲಪ್ಪಳ್ಳಿ ರಾಮಚಂದ್ರನ್ ಹೇಳಿಕೆ ನೀಡಿದ್ದಾರೆ.

ಕೊಚ್ಚಿಯಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ರಾಮಚಂದ್ರನ್, ಮುಂಬರುವ ಚುನಾವಣೆಯಲ್ಲಿ ಯುಡಿಎಫ್ ಪ್ರಣಾಳಿಕೆಯಲ್ಲಿ ಶಬರಿಮಲೆ ವಿಷಯ ಪ್ರಮುಖ ಅಂಶವಾಗಿರಲಿದೆ ಎಂದು ಹೇಳಿದರು.

ಯುಡಿಎಫ್ ಚುನಾವಣಾ ಪ್ರಣಾಳಿಕೆಯಲ್ಲಿ ಶಬರಿಮಲೆ ಪ್ರಮುಖ ವಿಷಯವಾಗಿರಲಿದೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಶಬರಿಮಲೆ ಸಂಬಂಧಿಸಿದಂತೆ ನಿಯಮ ತರಲಾಗುವುದು. ಆಕ್ತರ ಆಚಾರ ಹಾಗೂ ನಂಬಿಕೆಗೆಗಳಿಗೆ ಧಕ್ಕೆ ಬರದಂತೆ ಮುಂದುವರಿಯುವುದು ನಮ್ಮ ನಿಲುವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ತಿಳಿಸಿದರು.

ADVERTISEMENT

ಇದೇ ಸಂದರ್ಭದಲ್ಲಿ ಶಮರಿಮಲೆ ವಿಷಯಕ್ಕೆ ಸಂಬಂಧಿಸಿದಂತೆ ನಿಮಯ ರೂಪಿಸಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕೆ ಮುಂದಾಗುತ್ತಿಲ್ಲ ಎಂದು ಎಡರಂಗ ಸರ್ಕಾರವನ್ನು ಪ್ರಶ್ನಿಸಿದರು.

ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಹಮ್ಮಿಕೊಂಡಿರುವ ಐಶ್ಚರ್ಯ ಕೇರಳ ಯಾತ್ರೆಯ ಮುಕ್ತಾಯದ ಸಮಾವೇಶವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ ಎಂದವರು ಮಾಹಿತಿ ನೀಡಿದರು. ಅಲ್ಲದೆ ತಿರುವನಂತಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಸೇರಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.