ಚೆನ್ನೈ: ಸನಾತನ ಧರ್ಮ ಕುರಿತ ತಾವು ನೀಡಿದ್ದ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ಪುನರುಚ್ಚರಿಸಿದ್ದಾರೆ.
‘ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ. ಪ್ರಕರಣವನ್ನು ಕಾನೂನು ಪ್ರಕಾರ ಎದುರಿಸುತ್ತೇವೆ. ನನ್ನ ನಿಲುವಿನಲ್ಲಿ ಬದಲಿಲ್ಲ. ನನ್ನ ಸಿದ್ಧಾಂತ ಕುರಿತು ಮಾತನಾಡಿದ್ದೇನೆ’ ಎಂದು ಹೇಳಿದರು.
ಮದ್ರಾಸ್ ಹೈಕೋರ್ಟ್‌ನ ಅಭಿಮತ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು ಈ ಮಾತು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.