ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಜನರಿಗೆ ಯುಗಾದಿ ಹಬ್ಬದ ಶುಭಾಶಯ ಹೇಳಿದ್ದಾರೆ.
'ಯುಗಾದಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು' ಎಂದು ಟ್ವೀಟ್ ಮಾಡಿರುವ ಮೋದಿ, 'ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನವ ಸಂವತ್ಸರವು ನಿಮ್ಮೆಲ್ಲರ ಬದುಕಿನಲ್ಲಿ ಹೊಸ ಉತ್ಸಾಹ ಮತ್ತು ಸಂಭ್ರಮ ತರಲಿ' ಎಂದೂ ಹಾರೈಸಿದ್ದಾರೆ.
'ಇಂದು ದೇಶದ ವಿವಿಧ ಭಾಗಗಳಲ್ಲಿ ಚೈತ್ರ ನವರಾತ್ರಿ, ನವರೇಹ್, ಯುಗಾದಿ, ಗುಡಿ ಪಾಡ್ವಾ, ಸಜಿಬು ಚೀರೋಬಾ ಮತ್ತು ಚೇಟಿಚಂದ್ ಹಬ್ಬಗಳನ್ನು ಆಚರಿಸಲಾಗುತ್ತದೆ. ಹೊಸ ವರ್ಷವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ' ಎಂದು ಹಾರೈಸುತ್ತೇನೆ. ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.