ADVERTISEMENT

ಎಂಫಿಎಲ್‌, ಪಿಎಚ್‌.ಡಿ ಪ್ರಬಂಧ ಸಲ್ಲಿಸಲು ಅವಧಿ ವಿಸ್ತರಣೆ

ಪಿಟಿಐ
Published 2 ಡಿಸೆಂಬರ್ 2021, 10:21 IST
Last Updated 2 ಡಿಸೆಂಬರ್ 2021, 10:21 IST

ನವದೆಹಲಿ: ಎಂಫಿಲ್ ಮತ್ತು ಪಿಎಚ್‌.ಡಿ ಸಂಶೋಧನಾ ಪ್ರಬಂಧ ಸಲ್ಲಿಸಲು 2022ರ ಜೂನ್‌ 30ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ತಿಳಿಸಿದೆ.

ಈ ಮೊದಲು ಪ್ರಬಂಧ ಸಲ್ಲಿಸಲು 2021ರ ಡಿಸೆಂಬರ್ 31ರವರೆಗೆ ಅವಕಾಶ ಕಲ್ಪಿಸಲಾಗಿತ್ತು.ಹೆಚ್ಚಿನ ಸಂಖ್ಯೆಯ ಸಂಶೋಧನಾ ಅಭ್ಯರ್ಥಿಗಳ ಕೋರಿಕೆಯನ್ನು ಗಮನದಲ್ಲಿಟ್ಟುಕೊಂಡು ಅವಧಿ ವಿಸ್ತರಿಸಲಾಗಿದೆ ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ತಿಳಿಸಿದ್ದಾರೆ.

ಜೂನ್ 30 ಅಥವಾ ಅದಕ್ಕಿಂತ ಮೊದಲು ಪ್ರಬಂಧ ಸಲ್ಲಿಸಬೇಕಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಈ ವಿಸ್ತರಣೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.