ADVERTISEMENT

ಮೇ ತಿಂಗಳಿನಲ್ಲಿ ಎನ್‌ಇಟಿ: ಪೋಖ್ರಿಯಾಲ್‌

ಪಿಟಿಐ
Published 2 ಫೆಬ್ರುವರಿ 2021, 10:38 IST
Last Updated 2 ಫೆಬ್ರುವರಿ 2021, 10:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು (ಎನ್‌ಇಟಿ) ಮೇ ತಿಂಗಳಿನಲ್ಲಿ ನಡೆಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್‌ ಪೋಖ್ರಿಯಾಲ್‌ ‘ನಿಶಾಂಕ್’ ಮಂಗಳವಾರ ಹೇಳಿದ್ದಾರೆ.

‘ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ ಹಾಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಮೇ ತಿಂಗಳ 2,3,4,5,6,7, 10, 11, 12, 14 ಹಾಗೂ 17ರಂದು ಪರೀಕ್ಷೆ ನಡೆಸುವುದು. ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT