ADVERTISEMENT

ಉಜ್ಜಯಿನಿ ಮಹಾಕಾಳೇಶ್ವರ ದೇವಾಲಯದಲ್ಲಿ ಅಗ್ನಿ ಅವಘಡ: 13 ಅರ್ಚಕರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಮಾರ್ಚ್ 2024, 4:26 IST
Last Updated 25 ಮಾರ್ಚ್ 2024, 4:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇವಾಲಯದಲ್ಲಿ ಹೋಳಿ ಹಬ್ಬದ ಪ್ರಯುಕ್ತ ‘ಭಸ್ಮ ಆರತಿ’ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, 13 ಅರ್ಚಕರು ಗಾಯಗೊಂಡಿದ್ದಾರೆ.

ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ADVERTISEMENT

ಘಟನೆಯಲ್ಲಿ ಗಾಯಗೊಂಡವರನ್ನು ಉಜ್ಜಯಿನಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ನೀರಜ್‌ ಕುಮಾರ್‌ ಸಿಂಗ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಮೋಹನ್‌ ಯಾದವ್‌ ಅವರಿಂದ ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ, ಸಂತ್ರಸ್ತರಿಗೆ ಕೂಡಲೇ ಅಗತ್ಯ ನೆರವು ಒದಗಿಸಬೇಕು ಎಂದು ಸ್ಥಳೀಯ ಆಡಳಿತಕ್ಕೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.