ಕೀರ್ ಸ್ಟಾರ್ಮರ್
ರಾಯಿಟರ್ಸ್
ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಮುಂಬೈಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.
ಲಂಡನ್‌ನಿಂದ ವ್ಯಾಪಾರ ನಿಯೋಗದೊಂದಿಗೆ ಆಗಮಿಸಿದ ಸ್ಟಾರ್ಮರ್ ಅವರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಹಾಗೂ ರಾಜ್ಯಪಾಲ ಆಚಾರ್ಯ ದೇವವ್ರತ್ ಸ್ವಾಗತಿಸಿದರು.
ಭಾರತ–ಬ್ರಿಟನ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ ಮೋದಿ ಮತ್ತು ಸ್ಟಾರ್ಮರ್ ಗುರುವಾರ ಮುಂಬೈನಲ್ಲಿ ಭೇಟಿಯಾಗಲಿದ್ದಾರೆ.
ಸಿಇಒ ಫೋರಂ ಸಭೆ ಮತ್ತು ಗ್ಲೋಬಲ್ ಫಿನ್‌ಟೆಕ್ ಫೆಸ್ಟ್‌ನ 6ನೇ ಆವೃತ್ತಿಯಲ್ಲಿ ಅವರು ಭಾಗವಹಿಸಲಿದ್ದಾರೆ.
ತಮ್ಮ ಭೇಟಿಯ ಸಮಯದಲ್ಲಿ, ಮೋದಿ ಮತ್ತು ಸ್ಟಾರ್ಮರ್ ವಿಷನ್ 2035' ಮಾರ್ಗಸೂಚಿಗೆ ಅನುಗುಣವಾಗಿ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ ಮತ್ತು ನಾವೀನ್ಯತೆ, ರಕ್ಷಣೆ, ಹವಾಮಾನ, ಇಂಧನ, ಆರೋಗ್ಯ, ಶಿಕ್ಷಣ ಮತ್ತು ಜನರ ನಡುವಿನ ಸಂಬಂಧಗಳಲ್ಲಿನ ಉಪಕ್ರಮಗಳ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ವೈವಿಧ್ಯಮಯ ಅಂಶಗಳಲ್ಲಿನ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.