ಡೆಹ್ರಾಡೂನ್ (ಪಿಟಿಐ): ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತ ಮಸೂದೆಗೆ ಫೆಬ್ರುವರಿ 5ರಿಂದ ಆರಂಭವಾಗಲಿರುವ ಉತ್ತರಾಖಂಡ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದರು.
ಯುಸಿಸಿ ಮಸೂದೆಗೆ ಅಂಗೀಕಾರ ಪಡೆಯುವ ಸಲುವಾಗಿ ಈ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನ್ ಪ್ರಕಾಶ್ ದೇಸಾಯಿ ನೇತೃತ್ವದ ತಜ್ಞರ ಸಮಿತಿಯು ಯುಸಿಸಿ ಕರಡು ಮಸೂದೆಯನ್ನು ಫೆಬ್ರುವರಿ 2ರಂದು ರಾಜ್ಯ ಸರ್ಕಾರಕ್ಕೆ ಸಮರ್ಪಿಸಲಿದೆ ಎಂದು ವಿವರಿಸಿದರು. ಬಳಿಕ ಸಚಿವ ಸಂಪುಟ ಸಭೆಯಲ್ಲಿ ಕರಡು ಮಸೂದೆಯ ಕುರಿತು ಚರ್ಚಿಸಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.