ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತ
ಪಿಟಿಐ
ರುದ್ರಪ್ರಯಾಗ(ಉತ್ತರಖಂಡ): ಇಲ್ಲಿನ ಕೇದಾರನಾಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ ಒಬ್ಬ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯ ಲಂಬಗಾಂವ್ ನಿವಾಸಿ ಚಾಲಕ ರಾಜೇಶ್ ಸಿಂಗ್ ರಾವತ್(38) ಮೃತಪಟ್ಟಿದ್ದು, ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಲು ಛತ್ತೀಸಗಢದಿಂದ ಬಂದಿದ್ದ ಭಕ್ತರನ್ನು ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ತಲುಪಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗಾಯಾಳುಗಳನ್ನು ವಾಹನದಿಂದ ಹೊರತೆಗೆದು ಹತ್ತಿರದ ಆಗಸ್ಟ್‌ಮುನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇತರ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.