ADVERTISEMENT

ಉತ್ತರಾಖಂಡದಲ್ಲಿ ಕಂದಕಕ್ಕೆ ಉರುಳಿದ ಬಸ್‌: 6 ಮಂದಿ ಸಾವು, 22 ಮಂದಿಗೆ ಗಂಭೀರ ಗಾಯ

ಪಿಟಿಐ
Published 13 ಜನವರಿ 2025, 2:12 IST
Last Updated 13 ಜನವರಿ 2025, 2:12 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಡೆಹ್ರಾಡೂನ್: ಉತ್ತರಾಖಂಡದ ಪೌರಿ ಗರ್ವಾಲ್‌ ಜಿಲ್ಲೆಯ ಶ್ರೀನಗರದಲ್ಲಿ ಬಸ್‌ವೊಂದು ಕಂದಕಕ್ಕೆ ಬಿದ್ದ ಪರಿಣಾಮ ಆರು ಜನರು ಮೃತಪಟ್ಟಿದ್ದು, 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

28 ಪ್ರಯಾಣಿಕರನ್ನು ಹೊತ್ತ ಬಸ್‌ ಪೌರಿಯಿಂದ ದಹಲ್‌ಚೌರಿಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌, 100 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಿಳಿಸಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾಕಾರ್ಯಾಚರಣೆಯ ವೇಳೆ ಸ್ಥಳೀಯರು ಸಹಾಯ ಮಾಡಿದರು. ಗಾಯಗೊಂಡವರಲ್ಲಿ ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ‌ ಜಿಲ್ಲಾಧಿಕಾರಿ ಆಶಿಶ್, ಘಟನೆ ಬಗ್ಗೆ ತನಿಖೆ ನಡೆಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಸಂಬಂಧ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.