ನವದೆಹಲಿ: ಉಕ್ರೇನ್‌ನಲ್ಲಿನ ಸಂಘರ್ಷ ಶೀಘ್ರವಾಗಿ ಅಂತ್ಯಗೊಂಡು, ಶಾಂತಿ ಸ್ಥಾಪನೆಯಾಗಲು ಭಾರತ ಬೆಂಬಲ ನೀಡಲಿದೆ ಎಂದು ವಿದೇಶಾಂಗ ಸಚಿವಾಲಯ ಶುಕ್ರವಾರ ಹೇಳಿದೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಅಮೆರಿಕ ಮೇಲಿಂದ ಮೇಲೆ ಒತ್ತಡ ಹಾಕುತ್ತಿರುವ ಮಧ್ಯೆ ಭಾರತ ಪ್ರತಿಕ್ರಿಯೆ ನೀಡಿದೆ.
‘ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ನಡೆಯುತ್ತಿರುವ ಎಲ್ಲಾ ರೀತಿಯ ಪ್ರಯತ್ನಕ್ಕೆ ಭಾರತ ಬೆಂಬಲ ನೀಡಲಿದೆ. ಇದಕ್ಕಾಗಿ ಎಲ್ಲಾ ಪಕ್ಷಗಳು ಒಟ್ಟಾಗಿ ಮುಂದುವರಿಯುತ್ತವೆ ಎಂದು ನಾವು ಭಾವಿಸುತ್ತೇವೆ’ ಎಂಬುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
ಉಕ್ರೇನ್‌ನ ವಿದೇಶಾಂಗ ಸಚಿವ ಆ್ಯಂಡ್ರಿ ಸಬಿಹಾ ಜತೆಗೆ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್ ಉಕ್ರೇನ್‌ನಲ್ಲಿನ ಸಂಘರ್ಷದ ಬಗ್ಗೆ ಗುರುವಾರ ಚರ್ಚೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.