ADVERTISEMENT

ಬಾಲ್ಯವಿವಾಹ ತಡೆ: ವಿಶ್ವಸಂಸ್ಥೆಯ ವರದಿಯಲ್ಲಿ ಭಾರತದ ಕ್ರಮಗಳ ಉಲ್ಲೇಖ

ಪಿಟಿಐ
Published 24 ಸೆಪ್ಟೆಂಬರ್ 2020, 8:29 IST
Last Updated 24 ಸೆಪ್ಟೆಂಬರ್ 2020, 8:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಶ್ವಸಂಸ್ಥೆ: ಬಾಲ್ಯವಿವಾಹ ಮತ್ತು ಬಲವಂತದ ವಿವಾಹದಂತಹ ಪ್ರಕರಣಗಳನ್ನು ತಡೆಗಟ್ಟುವ ಕುರಿತು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸಿದ್ಧಪಡಿಸಿರುವವರದಿಯಲ್ಲಿ ಭಾರತವೂ ಸೇರಿದಂತೆ ವಿವಿಧ ದೇಶಗಳು ಕೈಗೊಂಡಿರುವ ಕ್ರಮಗಳನ್ನು ಉಲ್ಲೇಖಿಸಲಾಗಿದೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯ ಗುಟೆರಸ್ ವಿಶ್ವಸಂಸ್ಥೆಗೆ ಸಲ್ಲಿಸಿರುವ ‘ಮಕ್ಕಳ ಪ್ರಕರಣಗಳು, ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹ’ ಕುರಿತ ವರದಿಯಲ್ಲಿ ಜೂನ್‌ 2018ರಿಂದ ಮೇ 2020ರ ಅವಧಿಯಲ್ಲಿ ವಿವಿಧ ದೇಶಗಳು ಕೈಗೊಂಡಿರುವ ಕಾನೂನಾತ್ಮಕ ಕ್ರಮಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.

ಬಾಲ್ಯವಿವಾಹ ತಡೆಗಟ್ಟಲು ಹಾಗೂ ಬಲವಂತದ ಮದುವೆಗೆ ಕಡಿವಾಣ ಹಾಕಲು ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಕನಿಷ್ಠ ಮಿತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡ ಶಾಸನಾತ್ಮಕ ಕ್ರಮಗಳ ಬಗ್ಗೆ ಈ ವರದಿಯಲ್ಲಿ ಹೇಳಲಾಗಿದೆ.

ADVERTISEMENT

ಒಟ್ಟಾರೆ ವಿಶ್ವದಾದ್ಯಂತ ಬಾಲ್ಯವಿವಾಹದಂತಹ ಪಿಡುಗನ್ನು ಕೊನೆಗೊಳಿಸಲು ವಿಶ್ವದ ನಾನಾ ರಾಷ್ಟ್ರಗಳಲ್ಲಾಗುತ್ತಿರುವ ಪ್ರಗತಿಯನ್ನು ಈ ವರದಿಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.