ನರೇಂದ್ರ ಮೋದಿ
– ಪಿಟಿಐ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 71,000 ಉದ್ಯೋಗ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ವಿತರಿಸಲಿದ್ದಾರೆ. ತಮ್ಮ ಕಚೇರಿಯಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ವರ್ಚುವಲ್ ಆಗಿ ಮೋದಿ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.
ಉದ್ಯೋಗ ಸೃಷ್ಟಿಸಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಅತ್ಯಂತ ಬದ್ಧತೆಯ ಭಾಗವಾಗಿ ಈ ಉದ್ಯೋಗ ಮೇಳ ನಡೆಯುತ್ತಿದೆ ಎಂದು ಪ್ರಧಾನಿ ಕಾರ್ಯಾಲಯ(ಪಿಎಂಒ) ತಿಳಿಸಿದೆ.
ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದ್ದು, ಉದ್ಯೋಗಾಕಾಂಕ್ಷಿಗಳನ್ನು ಉಲ್ಲೇಖಿಸಿ ಮೋದಿ ಮಾತನಾಡಲಿದ್ದಾರೆ. ಉದ್ಯೋಗ ಮೇಳವು ದೇಶ ಕಟ್ಟುವ ಮತ್ತು ಸ್ವಯಂ ಸಬಲೀಕರಣಕ್ಕಾಗಿ ಯುವಜನತೆಗೆ ಅರ್ಥಪೂರ್ಣ ಅವಕಾಶ ಕಲ್ಪಿಸುತ್ತದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದೇಶದಲ್ಲಿ 45 ಭಾಗಗಳಲ್ಲಿ ನಡೆಯಲಿರುವ ಮೇಳದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯ ಮತ್ತು ಇಲಾಖೆಗಳಿಗೆ ಉದ್ಯೋಗಿಗಳ ನೇಮಕ ನಡೆಯಲಿದೆ.
ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಣೆ ಮಾಡುವ ಸಚಿವಾಲಯಗಳ ಪೈಕಿ ಕೇಂದ್ರ ಗೃಹ ಸಚಿವಾಲಯ, ಅಂಚೆ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಣಕಾಸು ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳೂ ಸೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.