ADVERTISEMENT

ಸಂಸತ್ತಿನಲ್ಲಿ ನಮ್ಮ ಧ್ವನಿ ಕೇಳಬೇಕಿದೆ: ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ

ಏಜೆನ್ಸೀಸ್
Published 13 ಸೆಪ್ಟೆಂಬರ್ 2020, 10:03 IST
Last Updated 13 ಸೆಪ್ಟೆಂಬರ್ 2020, 10:03 IST
ಅಧೀರ್‌ ರಂಜನ್‌ ಚೌಧರಿ
ಅಧೀರ್‌ ರಂಜನ್‌ ಚೌಧರಿ   

ನವದೆಹಲಿ: ನಿರುದ್ಯೋಗ, ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಸನ್ನಿವೇಶದ ಕುರಿತು ಮುಂಬರುವ ಅಧಿವೇಶನದಲ್ಲಿ ಚರ್ಚಿಸಲು ನಾವು ಪ್ರಸ್ತಾಪಿಸಿದ್ದೇವೆ ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ತಿಳಿಸಿದ್ದಾರೆ.

ಈ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, 'ನಿರುದ್ಯೋಗ, ವಲಸೆ ಕಾರ್ಮಿಕರ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ಸನ್ನಿವೇಶದ ಕುರಿತು ಮುಂಬರುವ ಅಧಿವೇಶನದಲ್ಲಿ ಚರ್ಚಿಸಲು ನಾವು ಪ್ರಸ್ತಾಪಿಸಿದ್ದೇವೆ. ನಮ್ಮ ಧ್ವನಿ ಸಂಸತ್ತಿನಲ್ಲಿ ಕೇಳಬೇಕಿದೆ. ಈ ವಿಚಾರವಾಗಿ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದೇವೆ' ಎಂದು ಅಧೀರ್‌ ಚೌಧರ್‌ ಹೇಳಿದ್ದಾರೆ.

'ನಾವು ಎತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸೆಪ್ಟೆಂಬರ್ 15 ರಂದು ಸ್ಪೀಕರ್ ಅವರು ವ್ಯಾವಹಾರಿಕ ಸಲಹಾ ಸಮಿತಿಯ ಮತ್ತೊಂದು ಸಭೆಯನ್ನು ಕರೆಯಲಿದ್ದಾರೆ' ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಶ್ನೋತ್ತರ ಅವಧಿ ರದ್ದುಗೊಳಿಸಿ ರಾಜ್ಯಸಭಾ ಸಚಿವಾಲಯ ಅಧಿಸೂಚನೆ ಹೊರಡಿಸಿತ್ತು. ಇದರ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.