ರಜೌರಿ (ಜಮ್ಮು): ಸ್ಫೋಟಗೊಳ್ಳದ ಹಲವು ಶೆಲ್‌ಗಳು ಜಮ್ಮುವಿನ ರಜೌರಿ ಜಿಲ್ಲೆಯ ಜನವಸತಿ ಪ್ರದೇಶದಲ್ಲಿ ಪತ್ತೆಯಾಗಿವೆ.
ಜನವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿಲ್ಲ ಎಂಬ ಪಾಕಿಸ್ತಾನ ವಾದ ಸತ್ಯವಲ್ಲ ಎಂಬುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
‘ನಾವು ಸೇನಾ ನೆಲೆಗಳ ಮೇಲೆ ಮಾತ್ರ ದಾಳಿ ಮಾಡಿದ್ದೇವೆ ಎಂದು ಪಾಕಿಸ್ತಾನ ಪದೇ ಪದೇ ಹೇಳುತ್ತಿರುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಗ್ರಾಮದ ನಡುವೆ ಶೆಲ್‌ಗಳು ಬಿದ್ದಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ಸುತ್ತಮುತ್ತಲಿನ ಪ್ರದೇಶದಲ್ಲಿ ಜನವಸತಿ ಇದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.