ADVERTISEMENT

ನ್ಯಾಯಮೂರ್ತಿಗಳನ್ನು ದೂಷಿಸುವ ಹೊಸ ಪ್ರವೃತ್ತಿ ದುರದೃಷ್ಟಕರ: ಎನ್.ವಿ. ರಮಣ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 16:07 IST
Last Updated 8 ಏಪ್ರಿಲ್ 2022, 16:07 IST
ಎನ್‌.ವಿ. ರಮಣ
ಎನ್‌.ವಿ. ರಮಣ   

ನವದೆಹಲಿ: ಸರ್ಕಾರಗಳು ನ್ಯಾಯಮೂರ್ತಿಗಳನ್ನು ದೂಷಿಸುವ ಹೊಸ ಪ್ರವೃತ್ತಿ ಆರಂಭವಾಗಿದ್ದು, ಇದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಶುಕ್ರವಾರ ಹೇಳಿದ್ದಾರೆ.

ಛತ್ತೀಸಗಡದ ಮಾಜಿ ಮುಖ್ಯ ಕಾರ್ಯದರ್ಶಿ ಅಮನ್‌ ಸಿಂಗ್‌ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸುವುದಕ್ಕೆ ಸಂಬಂಧಿಸಿದ ಅರ್ಜಿಯ ಕುರಿತು ತ್ರಿಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸುವ ಸಂದರ್ಭದಲ್ಲಿ ವಕೀಲರು ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿದ್ದರು. ಈ ವೇಳೆ ಎನ್.ವಿ. ರಮಣ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್‌ನ ಆದೇಶದ ವಿರುದ್ಧ ಛತ್ತೀಸಗಡ ಸರ್ಕಾರ ಮತ್ತು ಸಾಮಾಜಿಕ ಹೋರಾಟಗಾರ ಉಚಿತ್‌ ಶರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಅಮನ್ ಸಿಂಗ್‌ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.