ADVERTISEMENT

ಬಾಂಗ್ಲಾ: ಹಿಂದೂಗಳ ಮೇಲಿನ ದೌರ್ಜನ್ಯ ತಡೆಗೆ ಕೋಲ್ಕತ್ತ ಇಸ್ಕಾನ್ ಕೇಂದ್ರ ಆಗ್ರಹ

ಪಿಟಿಐ
Published 10 ಡಿಸೆಂಬರ್ 2024, 13:51 IST
Last Updated 10 ಡಿಸೆಂಬರ್ 2024, 13:51 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ಕಳವಳಕಾರಿಯಾಗಿದ್ದು, ವಿಶ್ವಸಂಸ್ಥೆಯ ಹೈಕಮಿಷನರ್ (ವಲಸಿಗರು) ಇತ್ತ ಗಮನಹರಿಸಬೇಕು ಎಂದು ಕೋಲ್ಕತ್ತದ ಇಸ್ಕಾನ್ ಕೇಂದ್ರ ಆಗ್ರಹಪಡಿಸಿದೆ.

ಬಾಂಗ್ಲಾದ ಮಧ್ಯಂತರ ಸರ್ಕಾರ ಗಲಭೆ, ದಾಂದಲೆ ನಡೆಸುತ್ತಿರುವ ಮೂಲಭೂತವಾದಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಅಲ್ಪಸಂಖ್ಯಾತರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಇಸ್ಕಾನ್ ಕೇಂದ್ರದ ವಕ್ತಾರ ರಾಧಾಮೋಹನ ದಾಸ್‌ ಒತ್ತಾಯಿಸಿದ್ದಾರೆ.

ADVERTISEMENT

ಮಾನವ ಹಕ್ಕುಗಳ ದಿನ ಆಚರಣೆ ಸಂದರ್ಭದಲ್ಲಿ ‘ಎಕ್ಸ್‌’ ಮೂಲಕ ಈ ಒತ್ತಾಯ ಮಾಡಿರುವ ಅವರು, ಮಾನವಹಕ್ಕುಗಳ ರಕ್ಷಣೆ ಕುರಿತು ವಿಶ್ವಸಂಸ್ಥೆ ಎಚ್ಚೆತ್ತುಕೊಳ್ಳಬೇಕು. ಬಾಂಗ್ಲಾದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೃದಯವಿದ್ರಾವಕವಾಗಿದೆ ಎಂದು ಹೇಳಿದ್ದಾರೆ.

ಅಮೆರಿಕ, ಬ್ರಿಟನ್‌ನ ಸಂಸದರು ಈ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಆದರೆ, ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (ಯುಎನ್‌ಎಚ್‌ಸಿ‌ಆರ್) ಈ ಕುರಿತಂತೆ ಇನ್ನೂ ಪ್ರತಿಕ್ರಿಯೆ ನೀಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.