ADVERTISEMENT

ರಾಷ್ಟ್ರೀಯ ಭಾವೈಕ್ಯಕ್ಕೆ ಯುಸಿಸಿ ಬೇಕು: ರಂಜನ್ ಗೊಗೊಯಿ

ಪಿಟಿಐ
Published 19 ಜನವರಿ 2025, 15:53 IST
Last Updated 19 ಜನವರಿ 2025, 15:53 IST
<div class="paragraphs"><p>ರಂಜನ್ ಗೊಗೊಯಿ </p></div>

ರಂಜನ್ ಗೊಗೊಯಿ

   

–ಪಿಟಿಐ ಚಿತ್ರ

ಸೂರತ್: ಪ್ರಸ್ತಾವಿತ ಏಕರೂಪ ನಾಗರಿಕ ಸಂಹಿತೆಯು (ಯುಸಿಸಿ) ರಾಷ್ಟ್ರೀಯ ಭಾವೈಕ್ಯ ಮತ್ತು ಸಾಮಾಜಿಕ ನ್ಯಾಯದ ಸಾಕಾರಕ್ಕೆ ಇರಿಸಿರುವ ಪ್ರಮುಖ ಹೆಜ್ಜೆ ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಐ), ರಾಜ್ಯಸಭಾ ಸದಸ್ಯ ರಂಜನ್ ಗೊಗೊಯಿ ಹೇಳಿದ್ದಾರೆ. ಯುಸಿಸಿ ಅನುಷ್ಠಾನಕ್ಕೆ ಮೊದಲು ಸಹಮತ ರೂಪಿಸಬೇಕು ಎಂದು ಅವರು ಒತ್ತಿಹೇಳಿದ್ದಾರೆ.

ADVERTISEMENT

‘ಸೂರತ್‌ ಸಾಹಿತ್ಯೋತ್ಸವ 2025’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಒಂದು ದೇಶ, ಒಂದು ಚುನಾವಣೆ’ ಆಲೋಚನೆಯನ್ನು ಬೆಂಬಲಿಸಿದರು. ಚುನಾವಣೆ ಮತ್ತೆ ಮತ್ತೆ ನಡೆಯುತ್ತಿದ್ದರೆ ಆಡಳಿತದ ಮೇಲೆ ಪರಿಣಾಮ ಉಂಟಾಗುತ್ತದೆ, ಹಣಕಾಸಿನ ಮೇಲೆ ಒತ್ತಡ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ.

‘ಏಕರೂಪ ನಾಗರಿಕ ಸಂಹಿತೆ ಹಾಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡುವ ಸಂವಿಧಾನದ 25, 26ನೆಯ ವಿಧಿಗಳ ನಡುವೆ ಸಂಘರ್ಷ ಉಂಟಾಗುವುದಿಲ್ಲ ಎಂಬುದನ್ನು ನಾವು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ.

ಯುಸಿಸಿಗೂ ಧರ್ಮಕ್ಕೂ ಸಂಬಂಧ ಇಲ್ಲ ಎಂದು ಗೊಗೊಯಿ ಹೇಳಿದ್ದಾರೆ. ಐದು ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್‌ ಯುಸಿಸಿ ಪರವಾಗಿ ಮಾತನಾಡಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.