
ಕೇಂದ್ರ ಬಜೆಟ್, ರಾಜ್ಯ, ರಾಷ್ಟ್ರೀಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

ಪಳೆಯುಳಿಕೆ ಅಲ್ಲದ ಇಂಧನ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಅಣುಶಕ್ತಿ ಕ್ಷೇತ್ರ ಹಾಗೂ ಬ್ಯಾಟರಿ ಶಕ್ತಿ ಸಂಗ್ರಹಣೆ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚಿಸಲು ಕೇಂದ್ರ ಸರ್ಕಾರವು ಮೂಲ ಕಸ್ಟಮ್ ಸುಂಕದಲ್ಲಿ ವಿನಾಯಿತಿ ನೀಡಿದೆ.
ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್‌ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.
ಕರ್ನಾಟಕದಲ್ಲಿ ಹೊಸ ರೈಲು ಮಾರ್ಗಗಳ ನಿರ್ಮಾಣ, ಜೋಡಿ ಹಳಿ ಹಾಗೂ ಗೇಜ್ ಪರಿವರ್ತನೆ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳಿಗೆ ಕೇಂದ್ರ ಬಜೆಟ್‌ನಲ್ಲಿ ₹7,748 ಕೋಟಿ ಹಂಚಿಕೆ ಮಾಡಲಾಗಿದೆ.
ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳನ್ನು (ಎಂಎಸ್‌ಎಂಇ) ಚಾಂಪಿಯನ್‌ಗಳಾಗಿ ರೂಪಿಸಲು ಕೇಂದ್ರ ಬಜೆಟ್‌ನಲ್ಲಿ ₹10 ಸಾವಿರ ಕೋಟಿ ಮೀಸಲಿರಿಸಲಾಗಿದೆ.
ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕಾರಣದಿಂದಾಗಿ ಮುಂಬರುವ ಜಿಲ್ಲಾ ಪರಿಷತ್ ಮತ್ತು ಪಂಚಾಯಿತಿ ಸಮಿತಿ ಚುನಾವಣಾ ಪ್ರಚಾರಗಳಲ್ಲಿ ಭಾಗಿಯಾಗದಿರಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ನಿರ್ಧರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ವೈಎಸ್‌ಆರ್‌ಸಿಪಿ ಆಡಳಿತಾವಧಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ (ಟಿಟಿಡಿ) ಸರಬರಾಜು ಮಾಡಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶವಿದೆ ಎಂದು ಎನ್‌ಡಿಡಿಬಿ–ಸಿಎಎಲ್‌ಎಫ್ ಪ್ರಯೋಗಾಲಯದಿಂದ ವರದಿ ಬಂದ ನಂತರವೇ ಮಾತನಾಡಿದ್ದೇನೆ’ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಭಾನುವಾರ ಹೇಳಿದ್ದಾರೆ.
‘ಎಲ್ಲ ರಾಜಕೀಯ ಪಕ್ಷಗಳೂ ಮಹಿಳೆಯರನ್ನು ಕಡೆಗಣಿಸುತ್ತಿದ್ದು ಕೇವಲ ಸಾಂಬಾರ್‌ಗೆ ಪರಿಮಳ ತುಂಬುವ ಕರಿಬೇವಿನಂತೆ ಬಳಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಪಕ್ಷಭೇದ ಬಿಟ್ಟು ಹೋರಾಡಬೇಕು. ಗ್ಲಾಮರಸ್ ಆಗಿ ಕಾಣಿಸಿಕೊಂಡು ನಾಯಕರ ಹಿಂದೆ ಓಡಾಡುವುದನ್ನು ನಿಲ್ಲಿಸಬೇಕು’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು.
ಅಮೆರಿಕ ಮಧ್ಯಸ್ಥಿಕೆಯಲ್ಲಿ ರಷ್ಯಾ ಮತ್ತು ಉಕ್ರೇನ್ ನಿಯೋಗಗಳ ನಡುವಿನ ಮತ್ತೊಂದು ಸುತ್ತಿನ ಮಾತುಕತೆಯು ಫೆ.4 ಮತ್ತು 5ರಂದು ನಡೆಯಲಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಭಾನುವಾರ ತಿಳಿಸಿದರು.
ಸಿದ್ದರಾಮಯ್ಯ
‘ಇದು ದೂರದೃಷ್ಟಿ ಇಲ್ಲದ, ನಿರಾಶಾದಾಯಕ ಬಜೆಟ್. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯಕ್ಕೆ ಬರೀ ಚೊಂಬು ಕೊಟ್ಟಿದೆ. ಕೇವಲ ಕರ್ನಾಟಕವಲ್ಲ, ಇಡೀ ದಕ್ಷಿಣ ಭಾರತಕ್ಕೇ ಏನೂ ಕೊಟ್ಟಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
ಬೆಂಗಳೂರು–ಹೈದರಾಬಾದ್, ಬೆಂಗಳೂರು–ಚೆನ್ನೈ ಸೇರಿದಂತೆ ದೇಶದ ವಿವಿಧ ನಗರಗಳ ನಡುವಿನ ಸಂಪರ್ಕ ಸೌಲಭ್ಯವನ್ನು ಇನ್ನಷ್ಟು ವೃದ್ಧಿಸಲು ದೇಶದಾದ್ಯಂತ ಏಳು ಹೊಸ ಹೈಸ್ಪೀಡ್ ರೈಲ್ವೆ ಕಾರಿಡಾರ್‌ಗಳನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಲಿದೆ.
ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಚುನಾವಣೆಯ ಫಲಿತಾಂಶ ಅತಂತ್ರವಾಗಿದೆ. ಅಧಿಕಾರ ಹಿಡಿಯಲು ಕಾಂಗ್ರೆಸ್ ಪಕ್ಷೇತರರು ಮತ್ತು ನಾಮನಿರ್ದೇಶಿತ ಸದಸ್ಯರ ಮೊರೆ ಹೋಗುವ ಸಾಧ್ಯತೆ ಇದೆ.
ಭಾನುವಾರ ಒಕ್ಕೂಟಕ್ಕೆ ಚುನಾವಣೆ ನಡೆಯಿತು. ಒಟ್ಟು 13 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಆರು, ಬಿಜೆಪಿ ಜೆಡಿಎಸ್ ಮೈತ್ರಿಕೂಟ ಐದು ಮತ್ತು ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಬೆಂಬಲಿತ (ಕೆಎಚ್‌ಪಿ ಬಣ) ಇಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.