ADVERTISEMENT

ಸುರೇಶ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ಕೇಂದ್ರ ಸಂಪುಟ

ಪಿಟಿಐ
Published 24 ಸೆಪ್ಟೆಂಬರ್ 2020, 8:30 IST
Last Updated 24 ಸೆಪ್ಟೆಂಬರ್ 2020, 8:30 IST
ಸುರೇಶ ಅಂಗಡಿ
ಸುರೇಶ ಅಂಗಡಿ   

ನವದೆಹಲಿ:ಕೊರೊನಾ ಸೋಂಕಿಗೆ ತುತ್ತಾಗಿ ಬುಧವಾರ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನಕ್ಕೆ ಕೇಂದ್ರ ಸಚಿವ ಸಂಪುಟ ಗುರುವಾರ ಸಂತಾಪ ಸೂಚಿಸಿತು.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುರೇಶ್ ಅಂಗಡಿಯವರ ಸ್ಮರಣಾರ್ಥ ಎರಡು ನಿಮಿಷಗಳ ಮೌನ ಆಚರಿಸಲಾಯಿತು. ನಂತರ ಸಂತಾಪ ಸೂಚಕ ನಿರ್ಣಯ ಮಂಡಿಸಲಾಯಿತು.

ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದಾಗಿ ದೇಶ ಒಬ್ಬ ಉತ್ತಮ ನಾಯಕ, ಶಿಕ್ಷಣ ತಜ್ಞ ಹಾಗೂ ಉತ್ತಮ ಸಂಸದೀಯ ಪಟುವನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ಸೂಚಕ ನಿರ್ಣಯದಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.