ADVERTISEMENT

ಕೇಂದ್ರ ಸಚಿವ ರಾಮ್‌ವಿಲಾಸ್ ಪಾಸ್ವಾನ್‌ಗೆ ಹೃದಯ ಶಸ್ತ್ರಚಿಕಿತ್ಸೆ

ಪಿಟಿಐ
Published 4 ಅಕ್ಟೋಬರ್ 2020, 7:29 IST
Last Updated 4 ಅಕ್ಟೋಬರ್ 2020, 7:29 IST
ರಾಮ್‌ವಿಲಾಸ್ ಪಾಸ್ವಾನ್
ರಾಮ್‌ವಿಲಾಸ್ ಪಾಸ್ವಾನ್   

ನವದೆಹಲಿ: ಕೇಂದ್ರ ಸಚಿವ, ಲೋಕಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಪುತ್ರ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

ಎದೆ ನೋವಿನ ಕಾರಣ ಕೆಲವು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಪಡೆದಿದ್ದರು. ಶನಿವಾರ ದಿಢೀರನೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಪುತ್ರ ಚಿರಾಗ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ನಾಯಕರು, ಚಿರಾಗ್‌ ಜತೆ ಮಾತನಾಡಿ, ಪಾಸ್ವಾನ್ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ಎಲ್‌ಜೆಪಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.