ADVERTISEMENT

ಕಾಶ್ಮೀರ: ಕೇಂದ್ರಾಡಳಿತ ಶುರು

ಪಿಟಿಐ
Published 30 ಅಕ್ಟೋಬರ್ 2019, 19:42 IST
Last Updated 30 ಅಕ್ಟೋಬರ್ 2019, 19:42 IST
   

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ರಾಜ್ಯವು ಇತಿಹಾಸದ ಪುಟ ಸೇರಿದೆ. ಜಮ್ಮು–ಕಾಶ್ಮೀರ ಮತ್ತು ಲಡಾಖ್‌ ಬುಧವಾರ ಮಧ್ಯರಾತ್ರಿಯಿಂದ ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿವೆ.

ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ಅವರು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಗಿ ಶ್ರೀನಗರದಲ್ಲಿ ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಅತ್ತ ಲೇಹ್‌ನಲ್ಲಿ ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಆಗಿ ಐಎಎಸ್ ಅಧಿಕಾರಿ ಆರ್‌.ಕೆ. ಮಾಥುರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಗೀತಾ ಮಿತ್ತಲ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

ದೇಶದ ಮೊದಲ ಗೃಹಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನವಾದ ಅಕ್ಟೋಬರ್ 31ರಂದು ಇವು ಅಸ್ತಿತ್ವಕ್ಕೆ ಬರಲಿವೆ. ಪಟೇಲ್ ಅವರು 560 ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರಿಸುವಲ್ಲಿ ಯಶಸ್ವಿಯಾಗಿದ್ದರು.

ADVERTISEMENT

ಜಮ್ಮು ಮತ್ತು ಕಾಶ್ಮೀರ ಪುನರ್‌ ವಿಂಗಡಣೆ ಕಾಯ್ದೆ2019 ಅನ್ನು ಸಂಸತ್ತು ಮೂರು ತಿಂಗಳ ಹಿಂದೆ ಅಂಗೀಕರಿಸಿತ್ತು. ಅದರ ಅನ್ವಯಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳು ಕಾರ್ಯಾರಂಭ ಮಾಡಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.