ADVERTISEMENT

ಜೆಎನ್‌ಯು ವಿದ್ಯಾರ್ಥಿ ಸಂಘಟನೆ ಎಡರಂಗದ ತೆಕ್ಕೆಗೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 20:22 IST
Last Updated 17 ಸೆಪ್ಟೆಂಬರ್ 2019, 20:22 IST
   

ನವದೆಹಲಿ (ಪಿಟಿಐ):ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಹುದ್ದೆಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಎಡರಂಗದ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವು ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿದೆ.

ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಚುನಾವಣೆ ನಡೆದಿತ್ತು.

ಎಡರಂಗದ ವಿದ್ಯಾರ್ಥಿ ಸಂಘಟನೆಗಳಾದ ಎಐಎಸ್‌ಎ, ಎಸ್‌ಎಫ್‌ಐ, ಎಐಎಸ್‌ಎಫ್‌ ಮತ್ತು ಡಿಎಸ್‌ಎಫ್‌ ಒಕ್ಕೂಟವು ನಾಲ್ಕೂ ಹುದ್ದೆಗಳಿಗೆ ತಮ್ಮ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದ್ದವು. ಈ ಎಲ್ಲಾ ಸ್ಥಾನಗಳಿಗೆ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತನ್ನ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿತ್ತು. ಕಾಂಗ್ರೆಸ್‌ ಬೆಂಬಲಿತ ಎನ್‌ಎಸ್‌ಯುಐ ಅಧ್ಯಕ್ಷರ ಸ್ಥಾನಕ್ಕೆ ಮಾತ್ರ ಸ್ಪರ್ಧಿಸಿತ್ತು.

ADVERTISEMENT

ನಾಲ್ಕೂ ಹುದ್ದೆಗಳನ್ನು ಎಡರಂಗದ ಅಭ್ಯರ್ಥಿಗಳು ಗೆದ್ದುಕೊಂಡಿದ್ದಾರೆ. ಎಬಿವಿಪಿ ಅಭ್ಯರ್ಥಿಗಳು ಎರಡನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.