ADVERTISEMENT

22 ಭಾಷೆಗಳಲ್ಲಿ ವಿ.ವಿ. ಪಠ್ಯ ಪುಸ್ತಕ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 18:33 IST
Last Updated 1 ಜುಲೈ 2019, 18:33 IST

ನವದೆಹಲಿ: ವಿಶ್ವವಿದ್ಯಾಲಯಗಳ ಹಂತದ ಪಠ್ಯಪುಸ್ತಕಗಳನ್ನು ಭಾಷಾಂತರ ಮಾಡಿ ಕನ್ನಡವೂ ಸೇರಿದಂತೆ 22 ಭಾಷೆಗಳಲ್ಲಿ ಪ್ರಕಟಿಸಲಾಗುತ್ತದೆ.

ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ರಮೇಶ್‌ ಪೋಖ್ರಿಯಾಲ್‌ ‘ನಿಶಾಂಕ್‌’ ಈ ಕುರಿತು ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದು, ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ನಮೂದಾಗಿರುವ ಎಲ್ಲ ಭಾಷೆಗಳಲ್ಲಿ ಕೇಂದ್ರದ ವಿವಿಧ ಯೋಜನೆಯಡಿ ಪಠ್ಯಗಳನ್ನು ಪ್ರಕಟಿಸಲಾಗುತ್ತಿದೆ’ ಎಂದು ತಿಳಿಸಿದರು. ಉನ್ನತ ಶಿಕ್ಷಣದ ಹಂತದಲ್ಲಿ ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ನೀಡಲು ಭಾಷಾಂತರ ಕಾರ್ಯಕ್ಕಾಗಿ ವೈಜ್ಞಾನಿಕ ಮತ್ತು ತಾಂತ್ರಿಕ ಪರಿಭಾಷೆ ಆಯೋಗ ಅನುದಾನ ನೀಡುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT