ADVERTISEMENT

ಉನ್ನಾವ್‌ ಅತ್ಯಾಚಾರ ಪ್ರಕರಣ: ತನಿಖೆ ನಡೆಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಪಿಟಿಐ
Published 9 ಸೆಪ್ಟೆಂಬರ್ 2020, 8:49 IST
Last Updated 9 ಸೆಪ್ಟೆಂಬರ್ 2020, 8:49 IST
ಸಿಬಿಐ
ಸಿಬಿಐ   

ನವದೆಹಲಿ: ಉನ್ನಾವ್‌ ಅತ್ಯಾಚಾರ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸದೆ ಲೋಪ ಎಸಗಿರುವ ನಾಲ್ವರು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬಿಐ ಶಿಫಾರಸು ಮಾಡಿದೆ

ಈ ಸಂಬಂಧ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಬಿಐ ಆಗಸ್ಟ್‌ನಲ್ಲಿ ಪತ್ರ ಬರೆದಿದೆ. ಈ ಪತ್ರದಲ್ಲಿಉನ್ನಾವ್‌ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ ಐಎಎಸ್‌ ಅಧಿಕಾರಿ ಅದಿತಿ ಸಿಂಗ್‌, ಐಪಿಎಸ್‌ ಅಧಿಕಾರಿ ಪುಷ್ಪಾಂಜಲಿ ದೇವಿ, ನೇಹಾ ಪಾಂಡೆ, ಅಷ್ಟಭುಜ ಸಿಂಗ್‌ ಅವರ ಹೆಸರನ್ನು ಪ್ರಸ್ತಾಪಿಸಲಾಗಿದೆ.

ಉನ್ನಾವ್‌ ಅತ್ಯಾಚಾರ ಪ್ರಕರಣದಲ್ಲಿ ಸರಿಯಾದ ರೀತಿಯನ್ನು ತನಿಖೆ ನಡೆಸದ ಕಾರಣ ಈ ಅಧಿಕಾರಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ.

ADVERTISEMENT

2017ರಲ್ಲಿ ಉತ್ತರಪ್ರದೇಶದ ಉನ್ನಾವ್‌ನ ಮಖಿ ಗ್ರಾಮದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್‌ದೀಪ್‌ ಸಿಂಗ್‌ ಸೆಂಗರ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.