ADVERTISEMENT

ಉನ್ನಾವೊ ಅತ್ಯಾಚಾರ ಅಪರಾಧಿಗೆ ಜಾಮೀನು ಪ್ರಶ್ನಿಸಿರುವ CBI ಅರ್ಜಿಯ ವಿಚಾರಣೆ ನಾಳೆ

ಪಿಟಿಐ
Published 28 ಡಿಸೆಂಬರ್ 2025, 6:53 IST
Last Updated 28 ಡಿಸೆಂಬರ್ 2025, 6:53 IST
<div class="paragraphs"><p>ಉನ್ನಾವೋ ಅತ್ಯಾಚಾರ ಪ್ರಕರಣದ ಅ‍ಪರಾಧಿ ಕುಲದೀಪ್‌ ಸೆಂಗಾರ್‌ (ಎಡ), ಸಂತ್ರಸ್ತೆಯ ಕುಟುಂಬದವರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರ್ತಿ ಯೋಗಿತಾ ಭಯಾನ</p></div>

ಉನ್ನಾವೋ ಅತ್ಯಾಚಾರ ಪ್ರಕರಣದ ಅ‍ಪರಾಧಿ ಕುಲದೀಪ್‌ ಸೆಂಗಾರ್‌ (ಎಡ), ಸಂತ್ರಸ್ತೆಯ ಕುಟುಂಬದವರೊಂದಿಗೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರ್ತಿ ಯೋಗಿತಾ ಭಯಾನ

   

ಕೃಪೆ: ಪಿಟಿಐ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದ ಅ‍ಪರಾಧಿ ಕುಲದೀಪ್‌ ಸೆಂಗಾರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಾಳೆ (ಡಿಸೆಂಬರ್ 29) ರಂದು ನಡೆಸಲಿದೆ.

ADVERTISEMENT

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ, ಅಗಸ್ಟಿನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಪೀಠವು, ಸಿಬಿಐ ಅರ್ಜಿಯ ಜೊತೆಗೆ, ಹೈಕೋರ್ಟ್‌ ಆದೇಶ ಪ್ರಶ್ನಿಸಿರುವ ವಕೀಲರಾದ ಅಂಜಲಿ ಪಟೇಲ್ ಮತ್ತು ಪೂಜಾ ಶಿಲ್ಪಕರ್ ಅವರ ಮೇಲ್ಮನವಿಯನ್ನೂ ಆಲಿಸಲಿದೆ.

2017ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ವಿಚಾರಣಾ ನ್ಯಾಯಾಲಯವು 2019ರಲ್ಲಿ ಸೆಂಗರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಶಿಕ್ಷೆ ಪ್ರಶ್ನಿಸಿ ಸೆಂಗರ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ನಡೆಸಿದ ದೆಹಲಿ ಹೈಕೋರ್ಟ್‌, ಅರ್ಜಿ ಇತ್ಯರ್ಥವಾಗುವರೆಗೆ ಶಿಕ್ಷೆಯನ್ನು ಅಮಾನತಿನಲ್ಲಿರಿಸಿ, ಡಿಸೆಂಬರ್‌ 23ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅಮಾನತುಗೊಂಡಿದ್ದರೂ ಸಂತ್ರಸ್ತೆ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಸೆಂಗರ್‌ಗೆ 10 ವರ್ಷಗಳ ಶಿಕ್ಷೆಯಾಗಿದೆ. ಹೀಗಾಗಿ ಅವರು ಜೈಲಿನಲ್ಲಿಯೇ ಇರುತ್ತಾರೆ ಎಂದೂ ಹೇಳಿತ್ತು.

ಸೆಂಗರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಖಂಡಿಸಿ ಸಂತ್ರಸ್ತೆ, ಅವರ ತಾಯಿ ಮತ್ತು ಮಹಿಳಾ ಪರ ಹೋರಾಟಗಾರರು ದೆಹಲಿ ಹೈಕೋರ್ಟ್‌ ಮುಂದೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಿದ್ದರು. ಜಾಮೀನು ರದ್ದು ಮಾಡಬೇಕು ಎಂದು ಆಗ್ರಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.