ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್‌ಗೆ ವೈದ್ಯಕೀಯ ಕಾರಣಗಳಿಗಾಗಿ ನೀಡಲಾಗಿದ್ದ ಮಧ್ಯಂತರ ಜಾಮೀನಿನ ಅವಧಿಯನ್ನು ದೆಹಲಿ ಹೈಕೋರ್ಟ್ ವಿಸ್ತರಿಸಿದೆ.
‘ಚಿಕಿತ್ಸೆಗಾಗಿ ಏಮ್ಸ್‌ಗೆ ಭೇಟಿ ನೀಡುವುದನ್ನು ಹೊರತುಪಡಿಸಿ, ಮನೆ ಬಿಟ್ಟು ಹೊರಹೋಗಬಾರದು’ ಎಂಬ ಷರತ್ತನ್ನು ನ್ಯಾಯಮೂರ್ತಿಗಳಾದ ಪ್ರತಿಭಾ ಎಂ. ಸಿಂಗ್ ಹಾಗೂ ಅಮಿತ್ ಶರ್ಮಾ ಅವರಿದ್ದ ಪೀಠ ವಿಧಿಸಿದೆ.
ಡಿ.20ರವರೆಗೂ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಪೀಠವು ಜ.20ರವರೆಗೂ ವಿಸ್ತರಿಸಿದೆ.
ಮಧ್ಯಂತರ ಜಾಮೀನು ವಿಸ್ತರಿಸುವುದನ್ನು ಸಿಬಿಐ ಹಾಗೂ ಅತ್ಯಾಚಾರ ಸಂತ್ರಸ್ತೆಯು ವಿರೋಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.