
ಪಿಟಿಐ
ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿಯ ಉಚ್ಚಾಟಿತ ನಾಯಕ ಕುಲದೀಪ್ ಸಿಂಗ್ ಸೆಂಗರ್‌ಗೆ ಕಣ್ಣಿನ ಶಸ್ತ್ರಚಿಕಿತ್ಸೆಗಾಗಿ ಮಂಗಳವಾರದವರೆಗೆ (ಫೆ. 4) ದೆಹಲಿ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ಪೀಠವು, ಸೆಂಗರ್‌ನ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯನ್ನು ಮಂಗಳವಾರ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಏಮ್ಸ್) ನಿಗದಿಪಡಿಸಲಾಗಿದೆ ಎಂದು ತಿಳಿಸಿದೆ.
ಫೆ. 5ರಂದು ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.