ADVERTISEMENT

ಉನ್ನಾವೊ ಅತ್ಯಾಚಾರ ಪ್ರಕರಣ | ಸೆಂಗರ್ ಶಿಕ್ಷೆ ಅಮಾನತು: ಮೇಲ್ಮನವಿ ವಿಚಾರಣೆ ಇಂದು

ಪಿಟಿಐ
Published 28 ಡಿಸೆಂಬರ್ 2025, 23:30 IST
Last Updated 28 ಡಿಸೆಂಬರ್ 2025, 23:30 IST
   

ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ, ಬಿಜೆಪಿ ಉಚ್ಚಾಟಿತ ನಾಯಕ ಕುಲದೀಪ್‌ಸಿಂಗ್‌ ಸೆಂಗರ್‌ಗೆ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ನಡೆಸಲಿದೆ.

‌ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್‌, ನ್ಯಾಯಮೂರ್ತಿಗಳಾದ ಜೆ.ಕೆ ಮಾಹೇಶ್ವರಿ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಅವರನ್ನೊಳಗೊಂಡ ರಜಾ ಪೀಠವು ಅರ್ಜಿಯ ವಿಚಾರಣೆ ನಡೆಸುವ ಸಾಧ್ಯತೆಯಿದೆ.

2019ರಲ್ಲಿ ವಿಚಾರಣಾ ನ್ಯಾಯಾಲಯ ಸೆಂಗರ್‌ಗೆ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್‌ ಡಿಸೆಂಬರ್ 23ರಂದು ಅಮಾನತುಗೊಳಿಸಿ, ಜಾಮೀನು ನೀಡಿತ್ತು.

ADVERTISEMENT

ದೆಹಲಿ ಹೈಕೋರ್ಟ್‌ ತೀರ್ಪಿಗೆ ತಡೆ ನೀಡುವಂತೆ ಕೋರಿ ವಕೀಲರಾದ ಅಂಜಲೆ ಪಟೇಲ್ ಮತ್ತು ಪೂಜಾ ಶಿಲ್ಪಕರ್ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯೂ ಸೋಮವಾರ ನಡೆಯಲಿದೆ.

ಸೆಂಗರ್ 2017ರಲ್ಲಿ ಬಾಲಕಿಯೊಬ್ಬಳನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.