ADVERTISEMENT

ಆಸ್ಪತ್ರೆಯಿಂದ ತೆರಳಿದ ಉನ್ನಾವೊ ಅತ್ಯಾಚಾರ ಸಂತ್ರಸ್ತೆ

ಪಿಟಿಐ
Published 25 ಸೆಪ್ಟೆಂಬರ್ 2019, 13:09 IST
Last Updated 25 ಸೆಪ್ಟೆಂಬರ್ 2019, 13:09 IST

ನವದೆಹಲಿ:ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗುಣಮುಖರಾಗಿದ್ದು ಏಮ್ಸ್‌ ಆಸ್ಪತ್ರೆಯಿಂದ ತೆರಳಿದ್ದಾರೆ.

ಕಳೆದ ಜುಲೈ 28ರಂದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ ಆದೇಶದ ಅನುಸಾರ ಇವರ ಕುಟುಂಬಕ್ಕೆ ಸಿಆರ್‌ಪಿಎಫ್‌ ಭದ್ರತೆ ಒದಗಿಸಲಾಗಿದೆ.

ಸಂತ್ರಸ್ತ ಮಹಿಳೆ ಮತ್ತು ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇರುವ ಕಾರಣ ಅವರು ದೆಹಲಿಯಲ್ಲಿ ವಾಸಿಸಲಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.