ADVERTISEMENT

ಸರ್ಕಾರದ ಭರವಸೆ ನಂಬಿದ ಕುಟುಂಬ: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ

ಏಜೆನ್ಸೀಸ್
Published 8 ಡಿಸೆಂಬರ್ 2019, 8:58 IST
Last Updated 8 ಡಿಸೆಂಬರ್ 2019, 8:58 IST
ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಭಾನುವಾರ ನಡೆಯಿತು.
ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಭಾನುವಾರ ನಡೆಯಿತು.    

ಲಖನೌ: ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಪಾರ್ಥಿವ ಶರೀರದ ಅಂತ್ಯಸಂಸ್ಕಾರವನ್ನು ಭಾನುವಾರ ಮಧ್ಯಾಹ್ನ ಕುಟುಂಬದ ಸದಸ್ಯರು ನೆರವೇರಿಸಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯವರೆಗೆ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಈ ಮೊದಲು ಕುಟುಂಬ ಸದಸ್ಯರು ಪಟ್ಟುಹಿಡಿದಿದ್ದರು.

ರಾಜ್ಯ ಸರ್ಕಾರದ ಉನ್ನತ ಅಧಿಕಾರಿಯೊಬ್ಬರುಕುಟುಂಬವನ್ನು ಭೇಟಿ ಮಾಡಿ ಸತತ ಎರಡು ತಾಸು ಮಾತುಕತೆ ನಡೆಸಿ, ಮನವೊಲಿಸುವಲ್ಲಿ ಯಶಸ್ವಿಯಾದರು.

ಉತ್ತರ ಪ್ರದೇಶ ಸರ್ಕಾರವು ₹ 25 ಲಕ್ಷ ಪರಿಹಾರ ಮತ್ತು ಮನೆ ನಿರ್ಮಿಸಿಕೊಡುವ ಭರವಸೆ ನೀಡಿದೆ. ಭವಿಷ್ಯದಲ್ಲಿ ಇಂಥ ದಾಳಿಗಳಿಂದ ರಕ್ಷಣೆ ನೀಡಲು ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕುಟುಂಬದ ಸದಸ್ಯರ ಇತರ ಬೇಡಿಕೆಗಳನ್ನೂ ಈಡೇರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತು.

ADVERTISEMENT

ಅತ್ಯಾಚಾರ ಸಂತ್ರಸ್ತೆಯ ಸೋದರಿ ತನ್ನ ಕುಟುಂಬ ಪೋಷಣೆಗಾಗಿ ತನಗೆ ಸರ್ಕಾರಿ ನೌಕರಿ ಬೇಕು ಎಂಬಬೇಡಿಕೆ ಮುಂದಿಟ್ಟಿದ್ದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.