ADVERTISEMENT

ಎನ್‌ಎಚ್‌ಆರ್‌ಸಿ ಮುಖ್ಯಸ್ಥ ಹುದ್ದೆ ನೇಮಕ: ವರದಿ ಅಲ್ಲಗಳೆದ ಡಿ.ವೈ.ಚಂದ್ರಚೂಡ್

ಪಿಟಿಐ
Published 20 ಡಿಸೆಂಬರ್ 2024, 14:22 IST
Last Updated 20 ಡಿಸೆಂಬರ್ 2024, 14:22 IST
ಡಿ.ವೈ.ಚಂದ್ರಚೂಡ್‌
ಡಿ.ವೈ.ಚಂದ್ರಚೂಡ್‌   

ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಖ್ಯಸ್ಥರ ಹುದ್ದೆಗೆ ತಮ್ಮನ್ನು ಪರಿಗಣಿಸಲಾಗುತ್ತಿದೆ ಎನ್ನುವ ಮಾಧ್ಯಮ ವರದಿಗಳನ್ನು ಸುಪ್ರೀಂ ಕೋರ್ಟ್‌ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಶುಕ್ರವಾರ  ಅಲ್ಲಗಳೆದಿದ್ದಾರೆ.

‘ಈ ವರದಿಗಳು ಸತ್ಯಕ್ಕೆ ದೂರವಾಗಿವೆ. ಪ್ರಸ್ತುತ, ನಿವೃತ್ತ ಜೀವನದಲ್ಲಿ ಸಂತೋಷದಿಂದ ಇದ್ದೇನೆ’ ಎಂದು ಅವರು ಹೇಳಿದ್ದಾರೆ.

ಎನ್‌ಎಚ್‌ಆರ್‌ಸಿ ಮುಖ್ಯಸ್ಥರ ಹುದ್ದೆಯು ಜೂನ್‌ 1ರಿಂದ ಖಾಲಿ ಉಳಿದಿದೆ..

ADVERTISEMENT

ಎನ್‌ಎಚ್‌ಆರ್‌ಸಿ ಮುಖ್ಯಸ್ಥರ ಆಯ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಡಿಸೆಂಬರ್‌ 18ರಂದು ಸಭೆ ನಡೆಸಿತ್ತು.

ಸಭೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.