ಲಖನೌ: ಉತ್ತರ ಪ್ರದೇಶ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾವನ್ನು ನಿಷೇಧಿಸಲಾಗಿದೆ ಎಂದು ವಿಧಾನಸಭಾ ಸ್ವೀಕರ್ ಸತೀಶ್ ಮಹನಾ ಅವರು ಬುಧವಾರ ಘೋಷಿಸಿದ್ದಾರೆ.
ಬುಧವಾರ ಪ್ರಶ್ನೋತ್ತರ ಅವಧಿಯ ನಂತರ ಮಾತನಾಡಿದ ಅವರು, ‘ತಕ್ಷಣದಿಂದಲೇ ಜಾರಿಗೆ ಬರುವಂತೆ ಉದ್ಯೋಗಿಗಳು, ಅಧಿಕಾರಿಗಳು ಸೇರಿದಂತೆ ಯಾರೇ ವಿಧಾನಸಭೆಯ ಆವರಣದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲಾ ಸೇವಿಸಿದ್ದು ಕಂಡಲ್ಲಿ, ಅವರಿಗೆ ₹1000 ದಂಡ ವಿಧಿಸಲಾಗುವುದು ಮತ್ತು ನಿಯಾಮಾನುಸಾರ ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.