ADVERTISEMENT

ಯುಪಿಯಲ್ಲೂ ಯುಎಸ್‌ನಲ್ಲಿರುವಂತಹ ರಸ್ತೆಗಳ ನಿರ್ಮಾಣ: ನಿತಿನ್ ಗಡ್ಕರಿ ಭರವಸೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2021, 5:25 IST
Last Updated 26 ಡಿಸೆಂಬರ್ 2021, 5:25 IST
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ   

ಪ್ರಯಾಗರಾಜ್: ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ, ಇಲ್ಲಿನ ರಸ್ತೆ ನಿರ್ಮಾಣ ಯೋಜನೆಗಳಿಗಾಗಿಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ₹ 5 ಲಕ್ಷ ಕೋಟಿ ವಿನಿಯೋಗಿಸಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಜಗದೀಶ್‌ಪುರ, ಬಾಬುಗಂಜ್, ಉಂಚಹಾರ್‌, ಅಲ್ಲಾಪುರ್‌ನಲ್ಲಿ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಗಡ್ಕರಿ, 'ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೇರಿದರೆ, ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶದ ರಸ್ತೆ ಯೋಜನೆಗಳಿಗಾಗಿ₹ 5 ಲಕ್ಷ ಕೋಟಿ ಹೂಡಿಕೆ ಮಾಡಲಾಗುವುದು. ರಾಜ್ಯದ ರಸ್ತೆಗಳನ್ನು ಅಮೆರಿಕದ ರಸ್ತೆಗಳಷ್ಟು ಉತ್ತಮವಾಗಿ ನಿರ್ಮಿಸುತ್ತೇವೆ' ಎಂದು ಭರವಸೆ ನೀಡಿದ್ದಾರೆ.

ಮುಂದುವರಿದು, 'ಯೋಗಿ ಆದಿತ್ಯನಾಥ ಮತ್ತು ಕೇಶವ್ ಪ್ರಸಾದ್ ಮೌರ್ಯ ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆ ವೇಳೆ ಡಬಲ್ ಎಂಜಿನ್ ಸರ್ಕಾರಕ್ಕೆ ಮತ ನೀಡಿ. ಉತ್ತರ ಪ್ರದೇಶವನ್ನು ಅಮೆರಿಕದ ರಾಜ್ಯಗಳಂತೆ ಅಭಿವೃದ್ಧಿಪಡಿಸುತ್ತೇವೆ' ಎಂದು ಹೇಳಿಕೊಂಡಿದ್ದಾರೆ.

ADVERTISEMENT

ಎಲ್ಲ ಹಳ್ಳಿಗಳನ್ನುರಸ್ತೆಗಳು ಮತ್ತು ಹೆದ್ದಾರಿಗಳೊಂದಿಗೆ ಸಂಪರ್ಕಿಸಬೇಕು ಎಂಬುದು ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿತ್ತು ಎಂದೂ ತಿಳಿಸಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.