ಪ್ರತಾಪ್‌ಗಢ:ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯಲ್ಲಿ ಶುಕ್ರವಾರಕಾರು ಟ್ರಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿಒಂದೇ ಕುಟುಂಬದ ಒಂಬತ್ತು ಜನರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತರು ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬಿಹಾರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
'ಸಂತ್ರಸ್ತರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ರಾಜಸ್ಥಾನದಿಂದ ಬಿಹಾರದ ಭೋಜ್‌ಪುರಕ್ಕೆ ತೆರಳುತ್ತಿದ್ದರು. ಗಾಯಗೊಂಡವರನ್ನುಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ' ಎಂದು ಪ್ರತಾಪ್‌ಗಢದ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.