ಲಖನೌ: ಉತ್ತರ ಪ್ರದೇಶ ಸಿಎಂ ಹಾಗೂ ಬಿಜೆಪಿ ನಾಯಕ ಯೋಗಿ ಆದಿತ್ಯನಾಥ್ ಶುಕ್ರವಾರ ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಒಟ್ಟು 403 ಸ್ಥಾನಗಳ ಪೈಕಿ 255 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ, 37 ವರ್ಷಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಆಡಳಿತ ಪಕ್ಷ ಎನಿಸಿಕೊಂಡಿದೆ.
ರಾಜೀನಾಮೆಗೂ ಮೊದಲು ಆದಿತ್ಯನಾಥ್ ಅವರು ಈ ಹಿಂದಿನ ಸರ್ಕಾರದ ಕೊನೆಯ ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅವರು ಹೋಳಿ ಹಬ್ಬಕ್ಕೂ ಮೊದಲು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಗಳಾಗಿವೆ. ಆದರೆ, ದಿನಾಂಕ ಈ ವರೆಗೆ ನಿಗದಿಯಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.