ADVERTISEMENT

ಯುವಕರ ಸೆಳೆಯಲು ಕಾಂಗ್ರೆಸ್‌ ತಂತ್ರ

ಪಿಟಿಐ
Published 6 ಸೆಪ್ಟೆಂಬರ್ 2020, 14:13 IST
Last Updated 6 ಸೆಪ್ಟೆಂಬರ್ 2020, 14:13 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಲಖನೌ: ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ ಕುರಿತು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸುವ ಮೂಲಕ ಉತ್ತರ ಪ್ರದೇಶದ ಕಾಂಗ್ರೆಸ್‌ ಘಟಕವು ಯುವ ಮತದಾರರನ್ನು ಸೆಳೆಯಲು ನಿರ್ಧರಿಸಿದೆ.

ರಾಜೀವ್‌ ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತ ರಸಪ್ರಶ್ನೆ ಸ್ಪರ್ಧೆಯನ್ನು ಸೆಪ್ಟೆಂಬರ್ 13 ಮತ್ತು 14 ರಂದು ಆನ್‌ಲೈನ್ ಮೂಲಕ ನಡೆಸಲಾಗುವುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ರಾಜೀವ್‌ ಗಾಂಧಿ ಅವರ ಕುರಿತು ಸಮಗ್ರ ಮಾಹಿತಿ ದೊರಕಲಿದೆಎಂದುಉತ್ತರ ಪ್ರದೇಶ ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಅವರು ಹೇಳಿದ್ದಾರೆ.

16 ರಿಂದ 22 ವರ್ಷದೊಳಗಿನವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಈವರೆಗೆ 5 ಲಕ್ಷ ಮಂದಿ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. 20 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.