ADVERTISEMENT

7 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ: 9 ದಿನದಲ್ಲಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2022, 4:49 IST
Last Updated 30 ಜೂನ್ 2022, 4:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಜಾಫರನಗರ: 7 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಆರಂಭಗೊಂಡು ಕೇವಲ 9 ದಿನದಲ್ಲಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ವಿಶೇಷ ಕೋರ್ಟ್‌ ತೀರ್ಪು ನೀಡಿದೆ. ದೋಷಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ನ್ಯಾಯಮೂರ್ತಿ ಮುಮ್ತಾಜ್‌ ಅಲಿ ಅವರು ದೋಷಿ ವಾಸಿಲ್‌ (21)ಗೆ 45,000 ದಂಡವನ್ನು ಹಾಕಿದ್ದಾರೆ. ಇದರಲ್ಲಿ ಅರ್ಧದಷ್ಟು ದುಡ್ಡನ್ನು ಸಂತ್ರಸ್ತ ಬಾಲಕನಿಗೆ ನೀಡುವಂತೆ ತಿಳಿಸಿದೆ.

ಪ್ರಕರಣದ ದೋಷಿ ಐಸ್‌ಕ್ಯಾಂಡಿಯ ಆಸೆ ತೋರಿಸಿ ಬಾಲಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದ. ಕೃತ್ಯದ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದ ಎಂದು ವಕೀಲ ಪುಷ್ಪೇಂದ್ರ ಮಲಿಕ್‌ ತಿಳಿಸಿದ್ದಾರೆ.

ADVERTISEMENT

2021ರ ಏಪ್ರಿಲ್‌ 1ರಂದ ಕೈರಾನಾ ಪ್ರದೇಶದಲ್ಲಿ ಕೃತ್ಯ ನಡೆದಿತ್ತು. 2022, ಜೂ.1ರಂದು ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಜೂ.21ರಂದು ವಿಚಾರಣೆಯನ್ನು ಕೋರ್ಟ್‌ ಕೈಗೆತ್ತಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.