ADVERTISEMENT

ಉ. ಪ್ರದೇಶ: ಉಪ ಮುಖ್ಯಮಂತ್ರಿ ಹುದ್ದೆಗೆ ನಿಶಾದ್‌ ಪಾರ್ಟಿ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 19:16 IST
Last Updated 23 ಜೂನ್ 2021, 19:16 IST
ಜೆ.ಪಿ. ನಡ್ಡಾ ಅವರೊಂದಿಗೆ ಸಂಜಯ್‌ ನಿಶಾದ್‌ ಮಾತುಕತೆ
ಜೆ.ಪಿ. ನಡ್ಡಾ ಅವರೊಂದಿಗೆ ಸಂಜಯ್‌ ನಿಶಾದ್‌ ಮಾತುಕತೆ   

ಲಖನೌ: ಉತ್ತರ ಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಉಪಮುಖ್ಯಮಂತ್ರಿ ಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ಬಿಜೆಪಿಯ ಪ್ರಮುಖ ಮಿತ್ರಪಕ್ಷ ‘ನಿಶಾದ್‌ ಪಾರ್ಟಿ’ಯ ಅಧ್ಯಕ್ಷ ಸಂಜಯ್‌ ನಿಶಾದ್‌ ಬೇಡಿಕೆ ಇಟ್ಟಿದ್ದಾರೆ. ಈ ಹುದ್ದೆಯನ್ನು ನೀಡದಿದ್ದರೆ ಮೈತ್ರಿಕೂಟದಿಂದ ಹೊರ ನಡೆಯುವ ಬೆದರಿಕೆಯನ್ನೂ ಒಡ್ಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ನಾಯಕರ ನಡುವೆ ಮೂಡಿರುವ ವೈಮನಸ್ಸನ್ನು ಶಮನ ಮಾಡುವಲ್ಲಿಬಿಜೆಪಿ ನಾಯಕರು ಶ್ರಮಿಸುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆಯೂ ನಡೆದಿದೆ.

‘ಉತ್ತರ ಪ್ರದೇಶದ ಒಟ್ಟು ಮತದಾರರಲ್ಲಿ ಶೇ 18ರಷ್ಟು ನಿಶಾದ್‌ ಸಮುದಾಯಕ್ಕೆ ಸೇರಿರುವವರು. ಅವರು ಸುಮಾರು 152 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ. 2022ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಬೇಕೆಂದರೆ ನನ್ನನ್ನು ಉಪ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು’ ಎಂದು ಸಂಜಯ್ ಅವರು ಮಾಧ್ಯಮದವರ ಮುಂದೆ ಹೇಳಿದ್ದಾರೆ. ಬಿಜೆಪಿಯ ರಾಷ್ಟ್ರಮಟ್ಟದ ನಾಯಕರ ಮುಂದೆಯೂ ಅವರು ಈ ಬೇಡಿಕೆ ಇರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.