ನವದೆಹಲಿ: ಉತ್ತರ ಪ್ರದೇಶದ ಮೊದಲ ಹಂತದ ವಿಧಾನಸಭೆ ಚುನಾವಣೆಯ 30 ಮಂದಿ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಸೋಮವಾರ ಬಿಡುಗಡೆ ಮಾಡಿದೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್, ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಗುಲಾಂ ನಬಿ ಆಜಾದ್, ಅಶೋಕ್ ಗೆಹಲೋತ್, ಭೂಪೇಶ್ ಬಘೇಲ್, ಸಚಿನ್ ಪೈಲಟ್ ಹಾಗೂ ಇತರರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.