ADVERTISEMENT

UP Election Results 2022: ಬಿಜೆಪಿಗೆ ಮುನ್ನಡೆ; ಮತ್ತೆ ಅಧಿಕಾರದತ್ತ ಯೋಗಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಮಾರ್ಚ್ 2022, 5:03 IST
Last Updated 10 ಮಾರ್ಚ್ 2022, 5:03 IST
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಆಡಳಿತಾರೂಢ ಬಿಜೆಪಿಯು ಬಹುಮತ ಸಾಧಿಸುವತ್ತ ದಾಪುಗಾಲಿಟ್ಟಿದೆ.

ಬಹುಮತ ಸಾಬೀತು ಪಡಿಸಲು 202 ಸ್ಥಾನಗಳನ್ನು ಗೆಲ್ಲಬೇಕಾಗಿದ್ದು,ಬೆಳಿಗ್ಗೆ 10ರ ವೇಳೆಗೆ ಬಿಜೆಪಿ ನೇತೃತ್ವದ ಮೈತ್ರಿಕೂಟದ 300ಕ್ಕೂ ಅಧಿಕ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ಕಾರವೇ ಮತ್ತೊಮ್ಮೆ ರಚನೆಯಾಗುವ ಸಾಧ್ಯತೆ ಇದೆ.

2017ರ ಚುನಾವಣೆಯಲ್ಲಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಎಸ್‌ಪಿ 47, ಬಿಎಸ್‌ಪಿ 19 ಕ್ಷೇತ್ರಗಳಲ್ಲಿ ಜಯ ಕಂಡರೆ, ಕಾಂಗ್ರೆಸ್ ಕೇವಲ 7 ಕಡೆ ಖಾತೆ ತೆರೆದಿತ್ತು.

ADVERTISEMENT

ಸದ್ಯದ ಟ್ರೆಂಡ್‌ ಗಮನಿಸಿದರೆ,ಬಿಜೆಪಿ ಸ್ಪಷ್ಟ ಬಹುಮತ ಹಾಗೂ ಎಸ್‌ಪಿ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಬಹುಜನ ಸಮಾಜವಾದಿ ಪಕ್ಷ ಈ ಬಾರಿ ತನ್ನ ಕೆಲವು ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.