ಬಲರಾಂಪುರ (ಯುಪಿ): 21 ವರ್ಷದ ಬುದ್ಧಿಮಾಂದ್ಯ ಮತ್ತು ಕಿವುಡ–ಮೂಕ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.
ಬೈಕಿನಲ್ಲಿ ಬಂದಿದ್ದ ಆರೋಪಿಗಳು ನಿರ್ಜನ ರಸ್ತೆಯಲ್ಲಿ ಯುವತಿಯನ್ನು ಬೆನ್ನಟ್ಟುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇದು ಶಂಕಿತರನ್ನು ಗುರುತಿಸಲು ಸಹಾಯ ಮಾಡಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಶಂಕಿತ ಆರೋಪಿಗಳಾದ ಅಂಕುರ್ ವರ್ಮಾ ಮತ್ತು ಹರ್ಷಿತ್ ಪಾಂಡೆಯನ್ನು ಎನ್‌ಕೌಂಟರ್ ನಂತರ ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ವಿಚಾರಣೆ ವೇಳೆ ಆರೋಪಿಗಳು ಅಪರಾಧ ನಡೆಸಿರುವುದು ಒಪ್ಪಿಕೊಂಡಿದ್ದಾರೆ ಎಂದು ಎಸ್‌ಪಿ ವಿಕಾಸ್ ಕುಮಾರ್ ಹೇಳಿದ್ದಾರೆ.
ಯುವತಿಯ ಸಹೋದರ ಎರಡು ದಿನಗಳ ನಂತರ ದೂರು ದಾಖಲಿಸಿದ್ದು, ಬಳಿಕ ಘಟನೆ ಬೆಳಕಿಗೆ ಬಂದಿತ್ತು. ಸೋಮವಾರ ಎಫ್‌ಐಆರ್ ದಾಖಲಾಗಿದ್ದು, ತಕ್ಷಣವೆ ತನಿಖೆ ಪ್ರಾರಂಭಿಸಲಾಗಿತ್ತು ಎಂದು ಎಸ್‌ಪಿ ತಿಳಿಸಿದ್ದಾರೆ.
ಯುವತಿಯು ತಮ್ಮ ಮನೆಯಿಂದ ತಾಯಿಯ ಚಿಕ್ಕಪ್ಪನ ಮನೆಗೆ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಅಪರಿಚಿತರು ಅವರನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದರು. ನಂತರ ನಿರ್ಜನ ಪ್ರದೇಶದಲ್ಲಿ ಅವರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.