ADVERTISEMENT

ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಅಧಿಕಾರಿಯಿಂದ ಅತ್ಯಾಚಾರ

ಪಿಟಿಐ
Published 9 ಜೂನ್ 2020, 11:22 IST
Last Updated 9 ಜೂನ್ 2020, 11:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬಂದಾ (ಉತ್ತರ ಪ್ರದೇಶ): ಕಂದಾಯ ಅಧಿಕಾರಿ ಹಾಗೂ ಇತರ ಇಬ್ಬರು ಸೇರಿ 18 ವರ್ಷದ ಯುವತಿಯನ್ನು ಅಪಹರಿಸಿ, ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಯುವತಿ ನೀಡಿದ ದೂರಿನ ಪ್ರಕಾರ, ಕಂದಾಯ ಅಧಿಕಾರಿ ಸುಶಿ ಪಟೇಲ್ ಹಾಗೂ ಇತರ ಇಬ್ಬರು ಶನಿವಾರ ಯುವತಿಮನೆಗೆ ನುಗ್ಗಿ ಕಾರಿನಲ್ಲಿ ಎಳೆದೊಯ್ದಿದ್ದಾರೆ. ಈ ವೇಳೆ ತಡೆಯಲು ಬಂದ ತಾಯಿಯನ್ನು ಆರೋಪಿಗಳು ತಳ್ಳಿದ್ದಾರೆ. ಕಾರಿನಲ್ಲಿ ಅತ್ಯಾಚಾರ ಎಸಗಲಾಗಿದೆ ಎಂದು ಠಾಣಾಧಿಕಾರಿ ಗಿರೀಂದ್ರ ಸಿಂಗ್ ಹೇಳಿದ್ದಾರೆ.

‘ಮಾರ್ಗಮಧ್ಯೆ ರಸ್ತೆಯಲ್ಲಿ ಕುರಿಹಿಂಡು ಎದುರಾದಾಗ, ಕಾರಿನಿಂದ ಇಳಿದು ತಪ್ಪಿಸಿಕೊಂಡು ಓಡಿಬಂದೆ’ ಎಂದು ಯುವತಿತಿಳಿಸಿದ್ದಾಳೆ.

ADVERTISEMENT

ಆಕೆ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.