ಲಖನೌ: ಸಂಭಲ್ ಜಿಲ್ಲೆಯ ಚಂದೌಸಿಯಲ್ಲಿ ನ.24ರಂದು ಸಂಭವಿಸಿದ ಹಿಂಸಾಚಾರ ಕುರಿತು ತನಿಖೆಗಾಗಿ ಮೂವರು ಸದಸ್ಯರು ಇರುವ ನ್ಯಾಯಾಂಗ ಆಯೋಗ ರಚಿಸಿದ್ದಾಗಿ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಘೋಷಿಸಿದ್ದಾರೆ.
ನ.28ರಂದು ಈ ಕುರಿತು ಅಧಿಸೂಚನೆ ಪ್ರಕಟಿಸಲಾಗಿದೆ.
‘ಅಧಿಸೂಚನೆ ಪ್ರಕಟಗೊಂಡ ಎರಡು ತಿಂಗಳ ಒಳಗಾಗಿ ತನಿಖೆ ಪೂರ್ಣಗೊಳಿಸಬೇಕು. ಸರ್ಕಾರದ ಅನುಮೋದನೆಯೊಂದಿಗೆ ತನಿಖಾ ಅವಧಿ ವಿಸ್ತರಿಸಬಹುದು’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಅರೋರಾ ಆಯೋಗದ ನೇತೃತ್ವ ವಹಿಸುವರು. ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಮೋಹನ್ ಪ್ರಸಾದ್, ನಿವೃತ್ತ ಐಪಿಎಸ್ ಅಧಿಕಾರಿ ಅರವಿಂದಕುಮಾರ್ ಜೈನ್ ಆಯೋಗದ ಸದಸ್ಯರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.