ADVERTISEMENT

ನಿರುದ್ಯೋಗ ಭತ್ಯೆ ನೀಡುವ ಯೋಜನೆಯಿಲ್ಲ: ಉತ್ತರ ಪ್ರದೇಶದ ಸಚಿವ

ಪಿಟಿಐ
Published 23 ಸೆಪ್ಟೆಂಬರ್ 2022, 13:16 IST
Last Updated 23 ಸೆಪ್ಟೆಂಬರ್ 2022, 13:16 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ನಿರುದ್ಯೋಗ ಭತ್ಯೆ ನೀಡುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉತ್ತರ ಪ್ರದೇಶದ ಕಾರ್ಮಿಕ ಮತ್ತು ಉದ್ಯೋಗ ಸಚಿವ ಅನಿಲ್ ರಾಜ್‌ಭರ್ ಹೇಳಿದ್ದಾರೆ.

ಸದನದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಉಮಾಶಂಕರ್ ಸಿಂಗ್ ಕೇಳಿದ ಪ್ರಶ್ನೆಗೆ ಅನಿಲ್ ರಾಜ್‌ಭರ್ ಈ ರೀತಿಯಾಗಿ ಉತ್ತರಿಸಿದ್ದಾರೆ.

ರಾಜ್ಯದಲ್ಲಿ ನೋಂದಾಯಿತ ನಿರುದ್ಯೋಗಿಗಳ ಸಂಖ್ಯೆ, ಎಷ್ಟು ಮಂದಿಗೆ ಉದ್ಯೋಗ ನೀಡಲಾಗಿದೆ ಮತ್ತು ನಿರುದ್ಯೋಗಿಗಳಿಗೆ ಭತ್ಯೆ ನೀಡುವ ಕುರಿತು ಸರ್ಕಾರದ ಪರಿಗಣನೆಯಲ್ಲಿದೆಯೇ ಎಂದು ಪ್ರಶ್ನಿಸಲಾಗಿತ್ತು.

ಇದಕ್ಕೆ ಉತ್ತರಿಸಿರುವ ಸಚಿವರು, ಉದ್ಯೋಗ ಬಯಸುವ ಅಭ್ಯರ್ಥಿಗಳ ನೋಂದಣಿಗೆ ವ್ಯವಸ್ಥೆಯಿದ್ದು, ಇದರಲ್ಲಿ 2017 ಮಾರ್ಚ್ 19ರಿಂದ 2022 ಸೆಪ್ಟೆಂಬರ್ 12ರವರೆಗೆ 25,39,619 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದಾರೆ ಎಂದು ಹೇಳಿದ್ದಾರೆ.

ಉದ್ಯೋಗ ಇಲಾಖೆಯು ಖಾಸಗಿ ವಲಯದಲ್ಲಿ ಉದ್ಯೋಗ ಮೇಳಗಳ ಮೂಲಕ ಒಟ್ಟು 6,68,269 ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ರಾಜ್‌ಭರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.