

ಲಖನೌ: ಓಮೈಕ್ರಾನ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಧ್ಯಪ್ರದೇಶವು ರಾತ್ರಿ ಕರ್ಫ್ಯೂ ಜಾರಿ ಮಾಡಿದ ಬೆನ್ನಿಗೆ ಉತ್ತರ ಪ್ರದೇಶವೂ ಅದೇ ಕ್ರಮಕ್ಕೆ ಮುಂದಾಗಿದೆ.
ನಾಳೆ (ಡಿ. 25)ಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 11ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಇರಲಿದೆ. ಮದುವೆ ಸಮಾರಂಭಗಳಿಗೆ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಈ ವರೆಗೆ 2 ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ಮಧ್ಯಪ್ರದೇಶದಲ್ಲಿ ಗುರುವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಗೆ ಬಂದಿದೆ. ರಾತ್ರಿ 11ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.